ಧಾರವಾಡ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಎಫ್ಐಆರ್ ಗಳಲ್ಲಿ 11 ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ಅಭಿಷೇಕ್ ಎಂಬ ಯುವಕ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಏ. 16 ರಂದು ಗುಂಪೊಂದು ಹಳೇ ಹುಬ್ಬಳ್ಳಿ ಠಾಣೆ ಎದುರು ಪೊಲೀಸರ ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆ 158 ಜನರ ಮೇಲೆ ಒಟ್ಟು 12 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದರು. 12 ಪ್ರಕರಣಗಳ ಪೈಕಿ 11 ಎಫ್ಐಆರ್ ರದ್ದು ಮಾಡಬೇಕು ಎಂದು ಆರೋಪಿಗಳ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು.
ನಿನ್ನೆ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ, ಪ್ರಕರಣದ ತನಿಖೆ ನಡೆಯುತಿದ್ದು, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಆಗಬೇಕಿದೆ, ಈ ಹಿನ್ನೆಲೆ ಎಫ್ ಐಆರ್ ರದ್ದು ಮಾಡಲು ಆಗಲ್ಲ ಎಂದು ಅರ್ಜಿ ವಜಾ ಮಾಡಿ ಆದೇಶಿಸಿದೆ.










