ಹುಬ್ಬಳ್ಳಿ ಗಲಭೆ ಪ್ರಕರಣ ; ಬಂಧಿತರ ಸಂಖ್ಯೆ 146ಕ್ಕೆ ಏರಿಕೆ…

74
firstsuddi

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 146 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರು, ಪ್ರಕರಣ ಈಗ ತನಿಖೆ ಹಂತದಲ್ಲಿದೆ. ಈತನಕ ಸುಮಾರು 146 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಗಲಭೆಗೆ ಪ್ರಚೋದನೆ ಕೊಟ್ಟವರು ಮತ್ತು ಗಲಭೆಯಲ್ಲಿ ಭಾಗವಹಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಕೆಲ ಆರೋಪಿಗಳು ಈ ಹಿಂದೆ ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಅದೆಲ್ಲವನ್ನೂ ಪರಿಶೀಲಿಸಲಾಗುತ್ತಿದೆ. ಗೂಂಡಾ ಕಾಯ್ದೆ ಸೇರಿ ಬೇರೆ ಬೇರೆ ಕಾಯ್ದೆಗಳ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಯಾವ ಪಕ್ಷದವರೇ ಇರಲಿ, ಯಾವ ಸಂಘಟನೆಯವರೇ ಆಗಿರಲಿ ಕೃತ್ಯದಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ. ಬಂಧಿತರಲ್ಲಿ ಇಬ್ಬರು ರೌಡಿಶೀಟರ್ ಗಳಿದ್ದು, ಒಬ್ಬ ಕಾರ್ಪೊರೇಟರನ್ನು ಬಂಧಿಸಲಾಗಿದೆ. ಅಪರಾಧ ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಖಂಡಿತ ಕ್ರಮ ಆಗುತ್ತೆ. ಪ್ರಕರಣದಲ್ಲಿ ಭಾಗಿಯಾದ ಮತ್ತಷ್ಟು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ.