ಹುಬ್ಬಳ್ಳಿ ಗಲಭೆ : ವಾಸೀಂ ಪಠಾಣ್‌ಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ…

54
firstsuddi

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ವಾಸೀಂ ಪಠಾಣ್‌ಗೆ ಹುಬ್ಬಳ್ಳಿಯ ನಾಲ್ಕನೇ ಜೆಎಂಎಫ್‌ಸಿ ಕೋರ್ಟ್ ಏಪ್ರಿಲ್ 30 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ.

ವಾಸೀಂ ಪಠಾಣ್ ಮತ್ತು ತೌಫೀಲ್ ಮುಲ್ಲಾ ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆಂದು ಕಸ್ಟಡಿಗೆ ಪಡೆದುಕೊಂಡಿದ್ದರು. ನಿನ್ನೆ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.