ಹುಬ್ಬಳ್ಳಿ – ಹೈದರಾಬಾದ್ ವಿಮಾನ ಪಯಣಕ್ಕೆ ಚಾಲನೆ…

123
firstsuddi

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಲಾಯನ್ಸ್ ಏರ್ ಸಿಇಒ ಹರ್ಪ್ರೀತ್ ಎ ಡಿ ಸಿಂಗ್ ಮತ್ತು ಧಾರವಾಡ ಜಿಲ್ಲಾಧಿಕಾರಿ ಹುಬ್ಬಳ್ಳಿ- ಹೈದರಾಬಾದ್ ನಡುವಿನ ವಿಮಾನ ಪಯಣಕ್ಕೆ ಇಂದು ಚಾಲನೆ ನೀಡಿದರು.

ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತವಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನಗಳ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಅವರು ಹೇಳಿದರು.

ವಾರದಲ್ಲಿ ಮೂರು ದಿನ ಹೈದರಾಬಾದ್ ನಗರಕ್ಕೆ ವಿಮಾನ ಸಂಚರಿಸಲಿದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಆಧರಿಸಿ ವಾರದ ಏಳು ದಿನವೂ ಸೇವೆ ವಿಸ್ತರಿಸಲಾಗುತ್ತದೆ. ಹುಬ್ಬಳ್ಳಿಯಲ್ಲಿ ರಾತ್ರಿ ಕೂಡ ವಿಮಾನ ಇಳಿಯಲು ಅವಕಾಶವಿದ್ದು, ಸ್ವಯಂ ಚಾಲಿತ ಲ್ಯಾಂಡಿಗ್ಗೆ ವ್ಯವಸ್ಥೆಯಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿಯವರ ವಿಶೇಷ ಪ್ರಯತ್ನದಿಂದ ಹುಬ್ಬಳ್ಳಿಯಿಂದ ಹೈದರಾಬಾದ್ ನಗರಕ್ಕೆ ವಿಮಾನ ಯಾನ ಸೇವೆ ಆರಂಭವಾಗಿದೆ. ಅವರಿಗೆ ನನ್ನ ವಿಶೇಷ ಧನ್ಯವಾದಗಳು. ಇನ್ನು ಹುಬ್ಬಳ್ಳಿ- ಮಂಗಳೂರು ನಡುವೆ ವಿಮಾನ ಸಂಪರ್ಕ ಕಲ್ಪಿಸಲು ಬೇಡಿಕೆ ಇದ್ದು, ಅದನ್ನು ಸಹ ಶೀಘ್ರವಾಗಿ ಪ್ರಾರಂಭಿಸಲಾಗುತ್ತದೆ. ಎಂದರು.

ಅಲೈಯನ್ಸ್ ಏರವೇಸ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಪ್ರ್ರೀತ್ ಎ ಡಿ ಸಿಂಗ್ ಅವರು ಮಾತನಾಡಿ, ಏರ್ ಇಂಡಿಯಾ ಭಾರತೀಯರ ಹೃದಯವನ್ನು ಬೆಸೆಯುವ ಕಾರ್ಯ ಮಾಡುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನವಿ ಮೇರೆಗೆ ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ವಿಮಾನಯಾನ ಸಂಪರ್ಕ ಕಲ್ಪಿಸಲಾಗಿದೆ. ಇದರಿಂದ ಕರ್ನಾಟಕ ಹಾಗೂ ತೆಲಂಗಾಣದ ಮಧ್ಯದ ಬಾಂಧವ್ಯ ವೃದ್ಧಿಯಾಗಲಿದೆ. ಮೇಕ್ ಇನ್ ಇಂಡಿಯಾ ಯೋಜನೆಯಡಿ ಹೆಚ್ ಎ ಎಲ್ ನೊಂದಿಗೆ ನಾಗರಿಕ ಪ್ರಯಾಣಿಕ ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಈಶಾನ್ಯ ರಾಜ್ಯಗಳಲ್ಲಿ ವಿಮಾನಯಾನ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಿಮಾನ ನಿಲ್ದಾಣ ಭದ್ರತಾಧಿಕಾರಿ ಜಗದೀಶ್ ಹಂಚಿನಾಳ್, ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ ಕುಮಾರ್ ಠಾಕರೆ, ಏರ್ ಇಂಡಿಯಾ ಸಿಬ್ಬಂದಿ ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.