ಹುಲಿವೇಷ ತಂಡದ ಮುಖ್ಯಸ್ಥ ಅಶೋಕ್ ರಾಜ್ ಕಾಡಬೆಟ್ಟು ವಿಧಿವಶ…

38
firstsuddi

ಉಡುಪಿ: ಹೆಸರಾಂತ ಹುಲಿವೇಷದಾರಿ, ಮುಖ್ಯಸ್ಥರಾದ ಅಶೋಕ್ ರಾಜ್ ಕಾಡಬೆಟ್ಟು ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಡುಪಿಯ ಕಾಡಬೆಟ್ಟುವಿನಲ್ಲಿ ಹುಲಿವೇಷ ತಂಡವನ್ನು ಕಟ್ಟಿ ಟೈಗರ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದರು. 2023 ಅಕ್ಟೋಬರ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಹುಲಿವೇಷ ಕಾರ್ಯಕ್ರಮ ನೀಡುತಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿದ್ದ ಅಶೋಕ್ ರಾಜ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆ ಬಳಿಕ ಉಡುಪಿ ಮತ್ತು ಮಣಿಪಾಲದ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು. ನಿನ್ನೆ ಸಂಜೆ ವೇಳೆ ಅವರು ನಿಧನರಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಹುಲಿವೇಷ ಧರಿಸಿ ಅಷ್ಟಮಿ, ಮತ್ತು ಇನ್ನಿತರ ಸಂದರ್ಭದಲ್ಲಿ ತಮ್ಮ ತಂಡದೊಂದಿಗೆ ಅವರು ಜನರಿಗೆ ಮನರಂಜಿಸುತ್ತಿದ್ದರು.