ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ – ತಪ್ಪಿದ ಅನಾಹುತ…

61
firstsuddi

ನವದೆಹಲಿ : ಪೂರ್ವ ದೆಹಲಿಯ ಗಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆಯಾಗಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಯಿತು.

ಇಂದು ಮಕರ ಸಂಕ್ರಾಂತಿ ಹಿನ್ನಲೆ ಮಾರ್ಕೆಟ್ ನಲ್ಲಿ ಸಾಕಷ್ಟು ಜನರು ಹಬ್ಬದ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದ್ದರು. ಈ ವೇಳೆ ಅನುಮಾನಾಸ್ಪದ ಬ್ಯಾಗ್ ನಲ್ಲಿ ಬಾಂಬ್ ಪತ್ತೆಯಾಗಿದೆ. ಇದರಿಂದ ಜನರು ಭಯಭೀತರಾಗಿದ್ದಾರೆ. ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಇರಿಸಲಾಗಿರುವ ಮಾಹಿತಿ ಸಿಕ್ಕ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ), ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ಕಳುಹಿಸಿದ್ದರು. ಬಾಂಬ್ ನಿಷ್ಕ್ರಿಯ ದಳ ಬಾಂಬ್ ನಾಶಪಡಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಭಾರೀ ಅನಾಹುತ ತಪ್ಪಿದೆ.

ಮಾರುಕಟ್ಟೆಯಲ್ಲಿ ಅನುಮಾನಾಸ್ಪದ ಬ್ಯಾಗ್ ವೊಂದರಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿತ್ತು. ಅದನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನ ಅವರು ತಿಳಿಸಿದ್ದಾರೆ.