ಮಂಗಳೂರು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರತಿಭಾನಿತ್ವ ವಿದ್ಯಾರ್ಥಿನಿ ಆಗಿದ್ದ ಶ್ರೇಯಾ ಪಕ್ಕಳ (16) ಎಂದು ಗುರುತಿಸಲಾಗಿದೆ.
ಪುತ್ತೂರು ತಾಲ್ಲೂಕಿನ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿದ್ದಳು. ಶ್ರೇಯಾಳಿಗೆ ಇಂದು ಬೆಳಗ್ಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಶ್ರೇಯಾ ಪಕ್ಕಳ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.










