ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವು…

39
firstsuddi

ಉಡುಪಿ: ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಅಫ್ಕಾರ್ (17) ಮೃತಪಟ್ಟ ವಿದ್ಯಾರ್ಥಿ. ಈತ ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜು ವಿದ್ಯಾರ್ಥಿಯಾಗಿದ್ದಾನೆ.

ಅಫ್ಕಾರ್, ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದನು. ಅಂತೆಯೇ ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ. ಡಿ.18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಮನೆಗೆ ಮರಳಿದ್ದ.

ಊರಿಗೆ ಹಿಂದಿರುಗಿದ ಬಳಿಕ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಹೀಗಾಗಿ ಮತ್ತೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಫ್ಕಾರ್ ಕೊನೆಯುಸಿರೆಳೆದಿದ್ದಾನೆ.