ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದರು. ಕೂಡಲೇ ನಾಗರಬಾವಿ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾದಾಗಿಂದಲೂ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಗುರುಲಿಂಗ ಸ್ವಾಮಿ, ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ಸಿಎಂ ಮಾಧ್ಯಮ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದರು. ಗುರುಲಿಂಗ ಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು. ಗುರುಲಿಂಗ ಸ್ವಾಮಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ಸಚಿವರುಗಳು ಸಂತಾಪ ಸೂಚಿಸಿದ್ದಾರೆ.










