ಹೃದಯಾಘಾತದಿಂದ ಲೋಕಾಯುಕ್ತ ಡಿವೈಎಸ್‍ಪಿ ಸಾವು…

49
firstsuddi

ವಿಜಯಪುರ: ಹೃದಯಾಘಾತದಿಂದ ಲೋಕಾಯುಕ್ತ ಡಿವೈಎಸ್‍ಪಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್‍ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತಪಟ್ಟ ಅಧಿಕಾರಿಯಾಗಿದ್ದಾರೆ. ನಿನ್ನೆ ಸಂಜೆ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.

ಅರುಣ್ ನಾಯಕ್, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅರುಣ್ ನಾಯಕ್ ಅವರ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದಾರೆ. ಅರುಣ್ ನಾಯಕ್ ಅವರ ಪತ್ನಿ ಮಗನೊಂದಿಗೆ ಬೆಂಗಳೂರಿನಲ್ಲೇ ವಾಸವಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪತ್ನಿ ಹಾಗೂ ಪುತ್ರ ವಿಜಯಪುರಕ್ಕೆ ಆಗಮಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಮೃತರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.