ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪಾಪಿ ಗಂಡ!

61
firstsuddi

ಬಾಗಲಕೋಟೆ: ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಬಿಸನಾಳ ಗ್ರಾಮದಲ್ಲಿ ನಡೆದಿದೆ.

ರೇಖಾ ಪರಸಪ್ಪ ಬೀಳಗಿ (24) ಕೊಲೆಯಾದ ಮಹಿಳೆ. ಇವಳ ಪತಿ ಪರಸಪ್ಪ ಬೀಳಗಿ (28) ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಗಂಡನ ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪದೆ ಪದೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ಇಬ್ಬರ ನಡುವಿನ ಜಗಳ ಅತಿರೇಕಕ್ಕೆ ತಿರುಗಿ, ಗಂಡನೇ ಮನೆಯಲ್ಲಿದ್ದ ಕೊಡಲಿಯಿಂದ ತನ್ನ ಹೆಂಡತಿಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾನೆ.

ಇನ್ನು ಮೃತ ರೇಖಾಳ ಪೋಷಕರು ವರದಕ್ಷಿಣೆ ಕಿರುಕುಳಕ್ಕಾಗಿ ಪರಸಪ್ಪ ತಮ್ಮ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.