ಹೆಂಡತಿ ಸಮಾಧಿ ಎದುರೇ ನೇಣುಬಿಗಿದುಕೊಂಡು ಗಂಡ ಆತ್ಮಹತ್ಯೆ…

65
firstsuddi

ಚಿಕ್ಕಬಳ್ಳಾಪುರ: ವ್ಯಕಿಯೊಬ್ಬ ತನ್ನ ಹೆಂಡತಿ ಸಮಾಧಿಗೆ ಪೂಜೆ ಮಾಡಿ ಆಕೆಯ ಸಮಾಧಿ ಎದುರೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದ ತೀಮಾಕಲಪಲ್ಲಿ ಸ್ಮಶಾನದಲ್ಲಿ ನಡೆದಿದೆ.

ನಗರದ 16ನೇ ವಾರ್ಡ್ ನಿವಾಸಿ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಗುರುಮೂರ್ತಿ ಅಲಿಯಾಸ್ ಲೆಗ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕಳೆದ ವರ್ಷ ಡಿಸೆಂಬರ್ 20 ರಂದು ಪತ್ನಿ ಮೌನಿಕಾ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗುರುಮೂರ್ತಿ ಕೂಡಾ ಹೆಂಡತಿ ಸಾವಿನ ನೋವಲ್ಲೇ ಮಾನಸಿಕ ಕಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಗ್ಗೆ ವಾಕಿಂಗ್ ಹೋಗಿ ಬರುವುದಾಗಿ ಹೇಳಿ ಹೋಗಿರುವ ಗುರುಮೂರ್ತಿ, ಪತ್ನಿ ಮೌನಿಕಾಳ ಸಮಾಧಿ ಪೂಜೆ ಮಾಡಿ, ನಂತರ ಅಲ್ಲೇ ಇದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.