ಹೆಣ್ಣು ಮಗುವಿಗೆ ಜನ್ಮ ಕೊಟ್ಟ ನಟಿ ಬಿಪಾಶಾ ಬಸು.

65
firstsuddi

ಬಾಲಿವುಡ್ ನಟಿ ಬಿಪಾಶಾ ಬಸು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 2016ರಲ್ಲಿ ಕರಣ್ ಸಿಂಗ್ ಗ್ರೋವರ್ ಜೊತೆ ಬಿಪಾಶಾ ಬಸು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದೇ ಆಗಸ್ಟ್ ನಲ್ಲಿ ಬಿಪಾಶಾ ತಾವು ಗರ್ಭಿಣಿಯಾಗಿರುವ ಸಂಗತಿಯನ್ನ ತಿಳಿಸಿದ್ದರು.

ಹಲವು ದಿನಗಳಿಂದ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಟಿ, ನಾಲ್ಕೈದು ಬಾರಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡು ಸಂಭ್ರಮಿಸಿದ್ದರು. ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಮೊದಲ ಮಗುವಿನ ಆಗಮನಕ್ಕೆ ಕಾಯುತ್ತಿದ್ದೇನೆ ಎಂದೂ ಬರೆದುಕೊಂಡಿದ್ದರು.

ಈಗ ಹೆಣ್ಣು ಮಗುವಿಗೆ ಜನ್ಮ ನೀಡುವ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ. ಬಿಪಾಶಾ ಇಷ್ಟಪಟ್ಟಂತೆ ಅವರಿಗೆ ಹೆಣ್ಣ ಮಗುವೇ ಆಗಿದೆ ಎಂದು ಹಲವರು ಸಂಭ್ರಮಿಸಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

2001ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಬಿಪಾಶಾ ಹಲವು ಸೂಪರ್ ಸ್ಟಾರ್ಸ್ ಜತೆ ತೆರೆ ಹಂಚಿಕೊಂಡಿದ್ದಾರೆ. ಅವರು ಬಾಲಿವುಡ್ ನಲ್ಲಿ ಮಾದಕ ನಟಿ ಎಂದೇ ಫೇಮಸ್ ಆಗಿದ್ದರು. ಅನೇಕ ಬೋಲ್ಡ್ ಪಾತ್ರಗಳನ್ನು ಮಾಡಿ ಬಿಪಾಶಾ ಗಮನ ಸೆಳೆದಿದ್ದಾರೆ.