ಹೆದ್ದಾರಿಯಲ್ಲಿ ನಿಂತಿದ್ದ ಬಸ್‌ಗೆ ಲಾರಿ ಡಿಕ್ಕಿ- 11 ಮಂದಿ ಸಾವು…

49
firstsuddi

ರಾಜಸ್ಥಾನ: ಭರತ್‌ಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಂಟ್ರಾ ಬಳಿಯ ಜೈಪುರ-ಆಗ್ರಾ ಹೆದ್ದಾರಿಯಲ್ಲಿ ಟ್ರೈಲರ್ ವಾಹನ ಬಸ್‌ಗೆ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿದ್ದು, ಇತರೆ 12 ಮಂದಿ ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಪ್ರಯಾಣಿಕರನ್ನು ತುಂಬಿದ ಬಸ್ ಭಾವನಗರದಿಂದ ಮಥುರಾಗೆ ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದ ಸಾವನ್ನಪ್ಪಿದವರಲ್ಲಿ ಆರು ಮಹಿಳೆಯರು ಮತ್ತು ಐವರು ಪುರುಷರು ಸೇರಿದ್ದಾರೆ. ಮೃತರು ಮತ್ತು ಗಾಯಗೊಂಡವರೆಲ್ಲರೂ ಭಾವನಗರ ನಿವಾಸಿಗಳು ಎಂದು ಹೇಳಲಾಗುತ್ತಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಲಖನಪುರ, ನಾಡಬಾಯಿ, ಹಲೈನ, ವೈರ್ ಠಾಣೆಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.