ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸರ್ಕಾರಿ ವೈದ್ಯ ಲೋಕಾಯುಕ್ತ ಬಲೆಗೆ…

49
firstsuddi

ತುಮಕೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸರ್ಕಾರಿ ವೈದ್ಯನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯ ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಡಾ.ಹರಿಪ್ರಸಾದ್ (44) ಎಂಬಾತ ಲೋಕಾಯುಕ್ತ ಬಲೆಗೆ ಬಿದ್ದ ವೈದ್ಯಾನಾಗಿದ್ದಾನೆ. ಡಾ. ಹರಿಪ್ರಸಾದ್ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಲು 3 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಮಹಿಳೆ ಸಂಬಂಧಿಯೊಬ್ಬರು ದೂರು ನೀಡಿದ್ದರು.

ಇಂದು ಹೆರಿಗೆಗೂ ಮುನ್ನ ಹಣ ಪಡೆಯುವಾಗ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್‍ಪೆಕ್ಟರ್ ರಾಮ ರೆಡ್ಡಿ, ಸಲೀಂ ಅಹ್ಮದ್ ಹಾಗೂ ಶಿವರುದ್ರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಈ ಕುರಿತು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.