ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಮತ ಚಲಾಯಿಸಿದ ಹೆಚ್.ಡಿ ದೇವೇಗೌಡ

47
firstsuddi

ಹಾಸನ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಮತ ಚಲಾಯಿಸಿದರು.

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಂದ ಹೆಚ್.ಡಿ ದೇವೇಗೌಡರು ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಲ್ಯಾಂಡಿಂಗ್ ಆದರು. ಬಳಿಕ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ ಹೊಳೆನರಸೀಪುರ ಕ್ಷೇತ್ರದ ಮತಗಟ್ಟೆ ಸಂಖ್ಯೆ 251 ರಲ್ಲಿ ಹಕ್ಕು ಚಲಾವಣೆ ಮಾಡಿದರು. ಈ ವೇಳೆ ಹೆಚ್.ಡಿ ದೇವೇಗೌಡರ ಜೊತೆಗೆ ಪತ್ನಿ ಚನ್ನಮ್ಮ ಜೊತೆಗಿದ್ದರು.