ಹೆಲಿಕಾಪ್ಟರ್ ಪತನ – ಏಳು ಮಂದಿ ಸಾವು…

52
firstsuddi

ಡೆಹ್ರಾಡೂನ್ : ಉತ್ತರಾಖಂಡದ ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.

ಕೇದರನಾಥ ದೇವಸ್ಥಾನದಿಂದ 2 ಕಿ.ಮೀ ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಈ ದುರಂತ ನಡೆದಿದೆ. ಹೆಲಿಕಾಪ್ಟರ್ ನಲ್ಲಿ 8 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 7 ಜನ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಹೆಲಿಕಾಪ್ಟರ್ ಯಾತ್ರಿಕರನ್ನು ಕೇದರನಾಥ ಧಾಮದಿಂದ ಗುಪ್ತಕಾಶಿ ಫಟಾಗೆ ಕರೆದೊಯ್ಯುತ್ತಿತ್ತು. ಅಪಘಾತ ಸಂಭವಿಸಿದ ಕೂಡಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಹವಾಮಾನ ವೈಪರಿತ್ಯದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಹೆಲಿಕಾಪ್ಟರ್ ಪತನದ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್ ಡಿಆರ್ ಎಫ್ ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ತಲುಪಿವೆ. ಈ ದುರಂತ ಘಟನೆಯ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.