ದುರ್ಗಾಪುರ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಮಮತಾ ಆಯತಪ್ಪಿ ಬೀಳುತ್ತಿದ್ದಂತೆ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಅವರು ಅಸನ್ಸೋಲ್‌ಗೆ ಪ್ರಯಾಣಕ್ಕೆ ಮುಂದಾದ ವೇಳೆ ಈ ಘಟನೆ ನಡೆದಿದೆ. ಅಲ್ಲಿಂದ ಮತ್ತೆ ಪ್ರಯಾಣ ಮುಂದುವರೆಸಿದ್ದಾರೆ.










