ಹೊರ ರಾಜ್ಯದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ-ರಾಜ್ಯ ಸರ್ಕಾರದಿಂದ ನಿಯಮ ಬದಲಾವಣೆ…

163
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅವರಲ್ಲಿ ಹೆಚ್ಚು ಮಂದಿ ಹೊರರಾಜ್ಯದಿಂದ ಬಂದವರೇ ಆಗಿದ್ದು, ಹೀಗಾಗಿ ರಾಜ್ಯ ಸರ್ಕಾರ ತನ್ನ ಕ್ವಾರಂಟೈನ್ ನಿಯಮಾವಳಿಯನ್ನು ಬದಲಾವಣೆ ಮಾಡಿದೆ. ಇದೀಗ ಹೊರ ರಾಜ್ಯದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕಡ್ಡಾಯವಾಗಿ 14 ದಿನ ಕ್ವಾರಂಟೈನ್‍ನಲ್ಲಿ ಇರಿಸಲಾಗುವುದು. ಈ ಹಿಂದೆ ಕೇವಲ ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ ಉಳಿದ 7 ದಿನ ಹೋಂ ಕ್ವಾರಂಟೈನ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸರ್ಕಾರ ತನ್ನ ನಿಯಮವನ್ನು ಬದಲಾವಣೆ ಮಾಡಿದ್ದು, ಇತರೆ ರಾಜ್ಯಗಳಿಂದ ಬಂದವರಿಗೂ ಅನ್ವಯಿಸುವಂತೆ ರಾಜ್ಯಕ್ಕೆ ಆಗಮಿಸಿದವರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಸೂಚಿಸಿದ್ದು, ಈ ಕುರಿತು ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.