ಹೊಸಪೇಟೆ : ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ಆಹಾರ ಇಲಾಖೆ ಅಧಿಕಾರಿಗಳು…

207
firstsuddi

ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ

ಹೊಸಪೇಟೆ : ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ಹೊಸಪೇಟೆ ಆಹಾರ ಇಲಾಖೆಯ ಶಿರಸ್ತೇದಾರ ನಾಗರಾಜ್ ಹೆಚ್.ಅವರು ಹೊಸಪೇಟೆ ತಾಲೂಕು ಗಾದಿಗನೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಭುವನಹಳ್ಳಿ ಗ್ರಾಮದ ಹೊರವಲಯದಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಪ್ಯಾಸೆಂಜರ್ ಆಟೋ ಸಮೇತ 3.15ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಅನಧಿಕೃತವಾಗಿ ಪಡಿತರ ಅಕ್ಕಿಯನ್ನು ಪಡಿತರದಾರರಿಂದ ಕಡಿಮೆ ಬೆಲೆಗೆ ಖರೀದಿಸಿ, ಸಂಗ್ರಹಿಸಿ ಪ್ಯಾಸೆಂಜರ್ ಆಟೋದಲ್ಲಿ ತುಂಬಿಕೊಂಡು ಕಾಳಸಂತೆಗೆ ಸಾಗಿಸುವ ವೇಳೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಆರೋಪಿತರು ಪಡಿತರ ಅಕ್ಕಿಯನ್ನು ಪಾಲಿಶ್ ಮತ್ತು ರೀಬ್ಯಾಗ್ ಮಾಡಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದುರುದ್ದೇಶದಿಂದ ಅಕ್ರಮ ಸಾಗಾಣಿಕೆ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ವಾಹನದ ಮೇಲೆ ದಾಳಿ ಮಾಡಿ ವಾಹನ ಮತ್ತು ವಾಹನದಲ್ಲಿದ್ದ 3.15ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಕೃತ್ಯದಲ್ಲಿ ಭಾಗಿಯಾದ ವಾಹನ ಚಾಲಕ ಹಾಗೂ ಮಾಲಿಕನಾದ ಕಂಪ್ಲಿಯ 17ನೇ ವಾರ್ಡ್‍ನ ನಿವಾಸಿ ಮಹಾದೇವ ಎಂಬ ಆರೋಪಿಯ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಗಾದಿಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸುವಂತೆ ಆಹಾರ ಶಿರೆಸ್ತೇದಾರ ನಾಗರಾಜ್ ಹೆಚ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಆಹಾರ ಶಿರಸ್ತೇದಾರ್ ನಾಗರಾಜ್ ಹೆಚ್, ಗಾದಿಗನೂರು ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.