ಹೊಸಪೇಟೆ : 1.58 ಕೋಟಿ ರೂ. ವೆಚ್ಚದಲ್ಲಿ ಶಾಲಾ ನವೀಕರಣ ಕಾಮಗಾರಿಗೆ ಹುಡಾ ಅಧ್ಯಕ್ಷ ಅಶೋಕ್ ಜೀರೆ ಅವರಿಂದ ಚಾಲನೆ…

143
firstsuddi

ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ

ಹೊಸಪೇಟೆ : 2019-20ನೇ ಸಾಲಿನ ಜಿಲ್ಲಾ ಖನಿಜ ನಿಧಿ ಯೋಜನೆ ಅಡಿಯಲ್ಲಿ ಮಂಜೂರಾದ ಮಲಪನಗುಡಿ ಗ್ರಾಮದ ಸರ್ಕಾರಿ ಶಾಲೆಯ ನವೀಕರಣ ಕಾಮಗಾರಿಯ ಭೂಮಿಪೂಜೆಯನ್ನು ಮಲಪನಗುಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹುಡಾ ಅಧ್ಯಕ್ಷ ಅಶೋಕ್ ಜೀರೆ ಅವರು ನೆರವೇರಿಸಿದರು.
ನಿರ್ಮಿತಿ ಕೇಂದ್ರದ ವತಿಯಿಂದ 1 ಕೋಟಿ 58 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ನವೀಕರಿಸುವ ಕಾಮಗಾರಿಗೆ ಚಾಲನೆ ದೊರೆತಿದೆ. ಈ ಸಂದರ್ಭದಲ್ಲಿ ಹೊಸಪೇಟೆ ತಾ.ಪಂ. ಅಧ್ಯಕ್ಷೆ ನಾಗವೇಣಿ ಬಸವರಾಜ, ಮಾಜಿ ಹುಡಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಸಚಿವರ ಆಪ್ತ ಸಹಾಯಕ ಧಮೇರ್ಂದ್ರ ಸಿಂಗ್, ಸಂದೀಪ್ ಸಿಂಗ್ ಸೇರಿದಂತೆ ಮಲಪನಗುಡಿ ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯರು ಇದ್ದರು.