ಹೊಸ ನಾಣ್ಯಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ.

46
firstsuddi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ‘ಐಕಾನಿಕ್ ವೀಕ್ ಸೆಲೆಬ್ರೇಷನ್ಸ್’ ನನ್ನು ಉದ್ಘಾಟಿಸಿದರು. ಇದೇ ವೇಳೆ ಆಜಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಹೊಸ ನಾಣ್ಯಗಳ ಮುಖಬೆಲೆ ಬಿಡುಗಡೆ ಮಾಡಿದರು.

ಮೋದಿ ಅವರು ವಿಶೇಷ ಸರಣಿಯ ರೂ. 1, 2, 5, 10 ಮತ್ತು 20 ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆ ಮಾಡಿದರು. ಈ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಾಜರಿದ್ದರು.

ನಾಣ್ಯ ಬಿಡುಗಡೆ ನಂತರ ಮಾತನಾಡಿದ ಮೋದಿ, ಹೊಸ ನಾಣ್ಯಗಳು ಜನರಿಗೆ ಅಮೃತ್ ಕಾಲವನ್ನ ನೆನಪಿಸುತ್ತವೆ. ಜೊತೆಗೆ ದೇಶದ ಅಭಿವೃದ್ಧಿಗೆ ಶ್ರಮಿಸಲು ಜನರಿಗೆ ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ 12 ಯೋಜನೆಗಳನ್ನೊಳಗೊಂಡ ಜನ್ ಸಮರ್ಥ್ ಯೋಜನೆಗೆ ಪ್ರಧಾನಿ ಚಾಲನೆ ನೀಡಿದ್ದಾರೆ.