ಲಕ್ನೋ : ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಂಪುಟವು ಹೊಸ ಮದರಸಾಗಳನ್ನು ಅನುದಾನದ ಪಟ್ಟಿಯಿಂದ ಹೊರಗಿಡುವ ಪ್ರಸ್ತಾಪವನ್ನು ಕ್ಯಾಬಿನೆಟ್ ಸಭೆಯಲ್ಲಿ ಅಂಗೀಕರಿಸಲಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮಂಡಿಸಿದ ಪ್ರಸ್ತಾವನೆಗೆ ಧ್ವನಿ ಮತದ ಒಪ್ಪಿಗೆ ದೊರೆಯಿತು.
ಈ ಮೂಲಕ ಯೋಗಿ ಸರ್ಕಾರವು ರಾಜ್ಯಾದ್ಯಂತ ಹೊಸ ಮದರಸಾಗಳಿಗೆ ಅನುದಾನ ನೀಡುವ ಎಲ್ಲಾ ಮಾರ್ಗಗಳನ್ನು ರದ್ದುಗೊಳಿಸಿದೆ. ಮದರಸಾಗಳಿಗೆ ಅನುದಾನ ನೀಡಲು ಹಿಂದಿನ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಸರ್ಕಾರ ಜಾರಿಗೆ ತಂದಿದ್ದ ನೀತಿಯನ್ನು 2016ರಲ್ಲಿ ಯೋಗಿ ಸರ್ಕಾರ ರದ್ದುಗೊಳಿಸಿತ್ತು.










