ರಾಜ್ಯಾದ್ಯಂತ ಹೊಸ ವರ್ಷಾಚರಣೆಗೆ ನಿರ್ಬಂಧ : ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ…

65
firstsuddi

ಬೆಳಗಾವಿ : ಕೋವಿಡ್ ನಿಯಂತ್ರಣ ಸಂಬಂಧ ಹೊಸ ವರ್ಷ ಆಚರಣೆಗೆ ಕೆಲ ನಿರ್ಬಂಧಗಳನ್ನು ವಿಧಿಸಿ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸುವರ್ಣಸೌಧದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಹೊಸ ವರ್ಷದ ಸಾಮೂಹಿಕ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಎಂಜಿ ರೋಡ್ ಬ್ರಿಗೇಡ್ ರೋಡ್ ಗಳೆಲ್ಲ ಡಿಜೆ ಬ್ಯಾನ್ ಮಾಡಲಾಗುತ್ತದೆ ಎಂದರು.

ಡಿಸೆಂಬರ್ 30 ರಿಂದ ಜನವರಿ 2 ರವರೆಗಿನ ನಿರ್ಬಂಧ ರಾಜ್ಯಾದ್ಯಂತ ಅನ್ವಯವಾಗಲಿದೆ. ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಶೇ.50ರಷ್ಟು ಜನರಿಗೆ ಅವಕಾಶ ನೀಡಲಾಗುತ್ತಿದೆ. ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿಗೆ ಎರಡು ಲಸಿಕೆ ಹಾಕಿಸಿರಬೇಕು, ಕ್ರಿಸ್ ಮಸ್ ಆಚರಣೆಗೆ ಯಾವುದೇ ನಿಷೇಧ ಇಲ್ಲ ಎಂದರು.