ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಎಂಆರ್ ಸಿಎಲ್ ನಮ್ಮ ಮೆಟ್ರೋ ಅವಧಿಯನ್ನು ವಿಸ್ತರಣೆ ಮಾಡಿದೆ. ಡಿಸೆಂಬರ್ 31 ರಂದು ರಾತ್ರಿ 3 ಗಂಟೆ ಮೆಟ್ರೋ ಸಂಚಾರ ಅವಧಿ ವಿಸ್ತರಿಸಿದೆ.
ಜನವರಿ 1ರ ಬೆಳಗಿನ ಜಾವ 2 ಗಂಟೆವರೆಗೂ ನಮ್ಮ ಮೆಟ್ರೋ ಸಂಚಾರ ಇರಲಿದೆ. ಕೊನೆಯ ನಮ್ಮ ಮೆಟ್ರೋ ಸಂಚಾರ ರಾತ್ರಿ 2 ಗಂಟೆಗೆ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನಾಲ್ಕು ದಿಕ್ಕಿಗೆ ಹೊರಡಲಿದೆ ಎಂದು ಬಿಎಂಆರ್ ಸಿಎಲ್ ಎಂ.ಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಜನವರಿ 1 ರಂದು ಎಂದಿನಂತೆ 5.30ಕ್ಕೆ ಮೆಟ್ರೋ ಸಂಚಾರ ಆರಂಭವಾಗಲಿದೆ. ಹೊಸ ವರ್ಷಾಚರಣೆ ಹಿನ್ನಲೆ ಎಂ.ಜಿ ರೋಡ್ ಬೈಯಪ್ಪನಹಳ್ಳಿ ಕಡೆಯಿಂದ ಸಂಚಾರ ಮಾಡುವ ಪ್ರಯಾಣಿಕರು ಮೆಟ್ರೋ ಬಳಕೆ ಮಾಡುವಂತೆ ಅಂಜುಂ ಪರ್ವೇಜ್ ಅವರು ಮನವಿ ಮಾಡಿದ್ದಾರೆ.










