ಹೊಸ ವರ್ಷಾಚರಣೆಗೆ ಪೊಲೀಸ್ ನಿಯಮ ಜಾರಿ – ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶ…

56
firstsuddi

ಬೆಂಗಳೂರು : ಹೊಸ ವರ್ಷ ಆಚರಣೆ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ವೀಡಿಯೋ ಕಾನ್ಫರೆನ್ಸ್ ಮೂಲಕ ಬಂದೋಬಸ್ತ್ ಗೆ ಸೂಚನೆ ನೀಡಲಾಗಿದೆ. 8,500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ರಾತ್ರಿ ಒಂದು ಗಂಟೆವರೆಗೆ ಮಾತ್ರ ಪಾರ್ಟಿ ಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಲೌಡ್ ಸ್ಪೀಕರ್ ಹಾಕಲು ಅನುಮತಿ ಪಡೆದಿರುವವರು ರಾತ್ರಿ ಹನ್ನೆರಡು ಗಂಟೆಯ ತನಕ ಬಳಸಬಹುದು. ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾಗಳನ್ನು ಹಾಕಲಾಗುತ್ತೆ ಎಂದು ವಿವರಿಸಿದರು.

ಹೊಸ ವರ್ಷಾಚರಣೆ ಸಂಭ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಲು ಬಿಡುವುದಿಲ್ಲ. ಸೂಕ್ತ ಭದ್ರತೆ ಒದಗಿಸಲಾಗುತ್ತದೆ. ಮಹಿಳೆಯರು ಹಾಗೂ ಮಕ್ಕಳು ಹಾಗೂ ವೃದ್ಧರ ಬಗ್ಗೆ ನಿಗಾ ವಹಿಸಿ ಹೆಚ್ಚಿನ ಭದ್ರತೆ ನೀಡಲಾಗುತ್ತದೆ. ನಗರದಲ್ಲಿನ ಪಬ್, ಬಾರ್ ಮತ್ತು ರೆಸ್ಟೊರೆಂಟ್ ಗಳಲ್ಲಿ ಇನ್ನಷ್ಟು ಕ್ಯಾಮೆರಾ ಅಳವಡಿಸುವಂತೆ ಮಾಲೀಕರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಆಯಾ ವಿಭಾಗದ ಡಿಸಿಪಿಗಳು, ಇತರೆ ಅಧಿಕಾರಿಗಳು, ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸೀಟ್ ಗಳಲ್ಲಿ ಅತಿ ಹೆಚ್ಚಾಗಿ ಬಂದೋಬಸ್ತ್ ಮಾಡಲಾಗುವುದು ಎಂದು ಅವರು ತಿಳಿಸಿದರು.

ಏನಾದರೂ ಆರೋಗ್ಯ ಸ್ಥಿತಿ ಗಂಬೀರ ಆದರೆ ಅಥವಾ ಪಾರ್ಟಿಯಲ್ಲಿ ಹೆಚ್ಚು ನಶೆಯಲ್ಲಿ ಇದ್ದು ಪೊಲೀಸರು ಹ್ಯಾಂಡಲ್ ಮಾಡಲು ಸಾಧ್ಯವಾಗಿಲ್ಲ ಎಂದಾದರೆ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲು ಮಾಡುತ್ತಾರೆ . ಆಸ್ಪತ್ರೆಯಲ್ಲಿ ಈಗಾಗಲೇ ಮಾತುಕತೆ ಮಾಡಿ ಬೆಡ್ ರೆಡಿ ಇಡಲಾಗಿದೆ. ಲೈಸೆನ್ಸ್ ಇರುವ ವೆಪ್‍ನ್ ಗಳನ್ನು ಪಾರ್ಟಿಗೆ ತರುವಂತಿಲ್ಲ.

ಜನರಲ್ಲಿ ನಮ್ಮದೊಂದು ಮನವಿ ಮಾಡುತ್ತೇವೆ. ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.