ಹೋಂ ಐಸೋಲೇಷನ್‍ನಲ್ಲಿರುವವರ ಮೇಲೆ ನಿಗಾ ಇಡಲು ಸೂಚನೆ : ಆರಗ ಜ್ಞಾನೇಂದ್ರ.

78
firstsuddi

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಯಿತು. ಸಭೆಯ ಬಳಿಕ ಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗೆ ಕರೆ ಮಾಡಿ, ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು. ಹೋಂ ಐಸೋಲೇಷನ್‍ನಲ್ಲಿ ಇರುವವರ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ. ಬೂಸ್ಟರ್ ಡೋಸ್ ತೀವ್ರಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳ ಚಿಕಿತ್ಸೆಗೆ ಔಷಧ ಕೊರತೆ ಆಗದಂತೆ ನೋಡಿಕೊಳ್ಳಬೇಕು. ತಕ್ಷಣ ಔಷಧ ಖರೀದಿ ಮಾಡಿ ಸಂಗ್ರಹಿಸಬೇಕು. ಮಕ್ಕಳಿಗೆ ಬೆಡ್ ಗಳನ್ನು ಮೀಸಲಿರಿಸಲು ಸಿಎಂ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಶಾಲೆ, ರೆಸಿಡೆನ್ಸಿ, ಹಾಸ್ಟೆಲ್ ಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ಶಾಲಾ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಬಂದರೆ ಡಿಸಿಗಳು ನಿರ್ಧಾರ ತಗೋಬೇಕು. ನಿರ್ದಿಷ್ಟ ಶಾಲಾ ಕಾಲೇಜುಗಳು ಬಂದ್ ಮಾಡಬೇಕಾ? ಬೇರೆ ಕ್ರಮ ತಗೋಬೇಕಾ ಅಂತ ಡಿಸಿ ನಿರ್ಧಾರವಾಗಿದೆ. ವೀಕೆಂಡ್ ಕರ್ಫ್ಯೂ ಕುರಿತು ಮುಂದಿನ ಸಭೆಯಲ್ಲಿ ನಿರ್ಧಾರಮಾಡಲಾಗುತ್ತದೆ. ಜನವರಿ 14ರ ಪ್ರಧಾನಿಯವರ ಸಭೆ ಬಳಿಕ ಇದರ ಚರ್ಚೆ ನೀಡಲಾಗುತ್ತದೆ ಎಂದಿದ್ದಾರೆ.

ಜನಜಂಗುಳಿ, ಪ್ರತಿಭಟನೆಗಳು ನಿರ್ಬಂಧ. ಬೆಂಗಳೂರಿನ ಮಾರುಕಟ್ಟೆಗಳು ಸ್ಥಳಾಂತರ ಮಾಡಲಾಗುತ್ತದೆ. ಮಾರುಕಟ್ಟೆಗಳ ವಿಕೇಂದ್ರೀಕರಣ ಹಿಂದಿನ ಅಲೆಯಲ್ಲಿ ಮಾಡಿದ್ರು, ಈಗಲೂ ಮಾರುಕಟ್ಟೆಗಳ ಸ್ಥಳಾಂತರ, ವಿಕೇಂದ್ರೀಕರಣಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಮಾಸ್ಕ್ ಬಗ್ಗೆ ಸ್ಥಳೀಯ ಜನರಲ್ಲಿ ಜಾಗೃತರಾಗಿರಬೇಕು. ನವೆಂಬರ್ 13ರ ಗುರುವಾರ ವೈಕುಂಠ ಏಕಾದಶಿಯಂದು ಸಂಪ್ರದಾಯದಂತೆ ದೇಗುಲಗಳಲ್ಲಿ ಪೂಜೆಗೆ ಅವಕಾಶವಿದೆ. ಆದರೆ ಹೆಚ್ಚಿನ ಜನ ಸೇರಬಾರದು ಎಂಬ ನಿಯಮ ಜಾರಿಗೊಳಿಸಲಾಗಿದೆ.

ಲಾಕ್ಡೌನ್ ಬಗ್ಗೆ ಇವತ್ತು ಚರ್ಚೆ ಆಗಿಲ್ಲ. ಪರಿಸ್ಥಿತಿ ನಮ್ಮ ಕೈಮೀರಿ ಹೋದಾಗ ಅದರ ಬಗ್ಗೆ ನಂತರ ಚರ್ಚೆ ಮಾಡಲಾಗುತ್ತದೆ. ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಿಯಮ ಉಲ್ಲಂಘನೆ ಬಗ್ಗೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು. ಪಾದಯಾತ್ರೆಯಲ್ಲಿ ಭಾಗಿಯಾದ ಬಹುತೇಕರಿಗೆ ಸೋಂಕು ಬಂದಿದೆ. ಸೋಂಕು ಬಂದಿದ್ದರೂ ಬಹಿರಂಗವಾಗಿ ಹೇಳಿಕೊಳ್ಳುತ್ತಿಲ್ಲ. ಮೇಕೆದಾಟು ಜಾರಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.