ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ- ಪೊಲೀಸರಿಂದ ಪರಿಶೀಲನೆ…

10
firstsuddi

ಬೆಂಗಳೂರು: ಹೋಟೆಲ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಸಿ ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದೆ.

‘ನಗರದ ಹೆಚ್ಎಂಟಿ ಮೈದಾನ ಸಮೀಪದ ಕದಂಬ ಗಾರ್ಡೇನಿಯಾ ಹೋಟೆಲ್‌ನಲ್ಲಿ ಬಾಂಬ್ ಇರಿಸಿದ್ದು, ಸ್ಫೋಟಿಸಲಿದ್ದೇನೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಬೆಳಿಗ್ಗೆ 11:50ಕ್ಕೆ ಠಾಣೆ ತಲುಪಿರುವ ಪತ್ರದಲ್ಲಿ ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಲಾಗಿದೆ. ‘ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆಸಿರುವುದು ನಾನೇ. ಅದೇ ರೀತಿಯಲ್ಲಿ ಈ ಹೋಟೆಲ್‌ನಲ್ಲೂ ಬಾಂಬ್ ಸ್ಪೋಟಿಸುತ್ತಿದ್ದೇನೆ” ಎಂದು ಬೆದರಿಕೆ ಹಾಕಲಾಗಿದೆ.

ಕೂಡಲೇ ಎಚ್ಚೆತ್ತ ಪೊಲೀಸರು ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.