ಮಂಗಳೂರು: ಕರಾವಳಿ ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ. ಈ ಕುರಿತು ಟ್ವಿಟ್ಟರ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದಿದ್ದಾರೆ.
60 ಕಿ.ಮೀ ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಇರಬಾರದು ಎಂಬುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮ. ಈ ಕಾರಣದಿಂದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ನ ಎನ್‌ಐಟಿಕೆ ಬಳಿ ಕಾರ್ಯಾಚರಿಸುತ್ತಿರುವ ಟೋಲ್‍ಗೇಟ್ ಅಕ್ರಮ ಎಂಬುದು ಟೋಲ್ ವಿರೋಧಿ ಹೋರಾಟಗಾರರ ಆರೋಪವಾಗಿತ್ತು.










