ನಾಗ್ಪುರ : ನಿನ್ನೆ ಬಾಂಗ್ಲದೇಶ ಮತ್ತು ಭಾರತ ತಂಡದ ನಡುವೆ ನಡೆದ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ತಂಡ 30 ರನ್‍ಗಳಿಂದ ಜಯಗಳಿಸಿದ್ದು, ಈ ಪಂದ್ಯದಲ್ಲಿ ಮಿಂಚಿತ ಯುವ ವೇಗಿ ದೀಪಕ್ ಚಹಾರ್ ಅವರು ಹ್ಯಾಟ್ರಿಕ್ ವಿಕೆಟ್ ಪಡೆದು 6 ವಿಕೆಟ್ ಪಡೆಯುವ ಮೂಲಕ ಟಿ-20 ಇತಿಹಾಸದಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. ಆರಂಭಿಕ 2 ಓವರ್ ಗಳಲ್ಲಿ 3 ರನ್ ನೀಡಿ 3 ವಿಕೆಟ್ ಪಡೆದ ಚಹಾರ್ ಅವರು 18ನೇ ಓವರ್ ನ ಕೊನೆಯ ಎಸೆತದಲ್ಲಿ 1 ವಿಕೆಟ್ ಹಾಗೂ 20ನೇ ಓವರ್ ನ 2ಎಸೆತದಲ್ಲಿ 2ವಿಕೆಟ್ ಪಡೆಯುವ ಮೂಲಕ ಅಂತರಾಷ್ಟ್ರೀಯ ಟಿ-20 ಇತಿಹಾಸದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.










