ಬೆಂಗಳೂರು: ನಟ ಶಿವರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಭೈರತಿ ರಣಗಲ್’ ಇಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಕಂಡಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಸಿನಿಮಾವಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಅದರಂತೆ, ಇಂದು 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಭೈರತಿ ರಣಗಲ್’ ಬಿಡುಗಡೆಯಾಗಿದೆ. ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ನರ್ತಕಿ ಚಿತ್ರಮಂದಿರದಲ್ಲಿ ಮುಂಜಾನೆ 6 ಗಂಟೆಗೆ ಸ್ಪೆಷಲ್ ಶೋ ಹಮ್ಮಿಕೊಳ್ಳಲಾಗಿತ್ತು. ವಿಶೇಷ ಪ್ರದರ್ಶನಕ್ಕೆ ನಿರ್ಮಾಪಕಿ ಗೀತಾ ಶಿವರಾಜ್‍ಕುಮಾರ್, ಪುತ್ರಿ ನಿವೇದಿತಾ ಹಾಜರಾಗಿದ್ದರು. ನಟರಾಕ್ಷಸ ಖ್ಯಾತಿಯ ಡಾಲಿ ಧನಂಜಯ್, ನಾಗಭೂಷಣ್, ವಿಕ್ಕಿ ಸಿನಿಮಾ ವೀಕ್ಷಿಸಿ ಸಂಭ್ರಮಿಸಿದ್ದಾರೆ. ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲಿ ಭೈರತಿ ರಣಗಲ್ ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ.










