ಕೃಷ್ಣರಾಜಸಾಗರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರ ಬೀಡಲಾಗಿದೆ…

418
firstsuddi

ಮಂಡ್ಯ- ಮಲೆನಾಡ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, 1 ಲಕ್ಷ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರ ಬೀಡಲಾಗಿದೆ. ಇಂದು ಮಧ್ಯ್ಯಾಹ್ನ 1 ಲಕ್ಷದ 20 ಸಾವಿರ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರಬೀಡುವ ಸಾಧ್ಯತೆ ಇದ್ದು, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಜನರು ತಮ್ಮ ಆಸ್ತಿ,ಪಾಸ್ತಿ,ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡುವ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರಾದ ಬಸವರಾಜೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.