10ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್…

72
firstsuddi

ಲಕ್ನೋ : 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿ ಟ್ಯೂಷನ್ ತರಗತಿಗೆ ಹೋಗಿದ್ದಳು. ಆ ವೇಳೆ ಇಬ್ಬರು ವ್ಯಕ್ತಿಗಳು ಬಂದು ಆಕೆಗೆ ಮಾದಕ ದ್ರವ್ಯ ನೀಡಿ ಸದ್ಪುರ ಗ್ರಾಮದ ಬಳಿ ಇರುವ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅರಣ್ಯದಲ್ಲಿದ್ದ ಮತ್ತಿಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಬಾಲಕಿಯು ಸಂಜೆ ಕಳೆದರೂ ಮನೆಗೆ ಬಾರದ ಹಿನ್ನಲೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಬಾಲಕಿಯ ಪತ್ತೆಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ. ಈ ವೇಳೆ ಬಾಲಕಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಾಲಕಿಗೆ ಚಿಕಿತ್ಸೆ ನೀಡಿದ್ದಾರೆ. ಪ್ರಜ್ಞೆ ಬಂದ ನಂತರ ಬಾಲಕಿ ತನ್ನ ಮೇಲೆ ನಡೆದಿರುವ ದುಷ್ಕೃತ್ಯದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾಳೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದು, ಮತ್ತಿಬ್ಬರಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಅಪ್ರಾಪ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.