ನವದೆಹಲಿ : ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ 10 ದಿನಗಳಲ್ಲಿ ಲೀಟರ್ ತೈಲ ಬೆಲೆಯಲ್ಲಿ 6.40ರೂ. ಏರಿಕೆಯಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ದರ ರೂ. 91.29ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 101.81 ರೂಪಾಯಿ ಇದೆ. ಡೀಸೆಲ್ ಲೀಟರ್ ಗೆ ರೂ.93.07 ಕ್ಕೆ ಏರಿಕೆಯಾಗಿದೆ. ಕೋಲ್ಕತ್ತದಲ್ಲಿ ಪೆಟ್ರೋಲ್ 110.52 ರೂಪಾಯಿ, ಡೀಸೆಲ್ 95.42 ರೂಪಾಯಿ ಇದೆ. ಚೆನ್ನೈನಲ್ಲಿ ಪೆಟ್ರೋಲ್ 106.69 ರೂ., ಡೀಸೆಲ್ 96.76 ರೂ.ಇದೆ. ಮುಂಬೈನಲ್ಲಿ ಲೀ ಪೆಟ್ರೋಲ್ ಗೆ 84 ಪೈಸೆ ಏರಿಕೆಯಾಗಿದ್ದು, ಈ ಮೂಲಕ ಲೀ. ಪೆಟ್ರೋಲ್ ದರ ರೂ. 116.72, ಡೀಸೆಲ್ ರೂ.100.94 ದಾಖಲಾಗಿದೆ.
ಮಾರ್ಚ್ 22 ರಿಂದ ತೈಲ ದರ ಪರಿಷ್ಕರಣೆ ಆರಂಭವಾದ ಬಳಿಕ ಇದು ಒಂಬತ್ತನೇ ಹೆಚ್ಚಳವಾಗಿದೆ. ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿರುವುದರಿಂದ ಸ್ಥಳೀಯ ತೆರಿಗೆಯ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಬೆಲೆಗಳಲ್ಲಿ ಬದಲಾವಣೆ ಇದೆ.










