10, 12ನೇ ತರಗತಿಯ ಆಫ್‌ಲೈನ್‌ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ…

66
firstsuddi

ನವದೆಹಲಿ : ಈ ವರ್ಷ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್ಇ), ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಸಿಐಎಸ್ ಸಿಇ) ಮತ್ತು ಇತರ ಹಲವು ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಗಳ ಆಫ್‌ಲೈನ್ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ಪೀಠ, ಇಂತಹ ಅರ್ಜಿಗಳು ಕೇವಲ ಸುಳ್ಳು ಭರವಸೆಗಳನ್ನು ಸೃಷ್ಟಿಸುತ್ತದೆ ಮತ್ತು ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಗೊಂದಲ ಉಂಟುಮಾಡುತ್ತದೆ ಎಂದು ಹೇಳಿದೆ.

ವಿದ್ಯಾರ್ಥಿಗಳು ತಮ್ಮ ಕೆಲಸ ಮಾಡಲಿ ಮತ್ತು ಅಧಿಕಾರಿಗಳು ಅವರ ಕೆಲಸವನ್ನು ಮಾಡಲಿ ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.

ಸಿಬಿಎಸ್ಇ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಏಪ್ರಿಲ್ 26 ರಿಂದ ನಡೆಸಲು ನಿರ್ಧರಿಸಿದೆ. ಏತನ್ಮಧ್ಯೆ, ಸಿಐಎಸ್ ಸಿಇ, ಐಸಿಎಸ್ಇ 10 ನೇ ತರಗತಿ ಮತ್ತು ಐಎಸ್ಸಿ12 ನೇ ತರಗತಿ ಪರೀಕ್ಷೆಯನ್ನು ಏಪ್ರಿಲ್ ಕೊನೆಯ ವಾರದಲ್ಲಿ ನಡೆಸುವ ಸಾಧ್ಯತೆಯಿದೆ.