ವಿದ್ಯುತ್ ತಂತಿ ತಗುಲಿ 10 ವರ್ಷದ ಗಂಡು ಆನೆ ಸಾವು…

501
firstsuddi

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ 10 ವರ್ಷದ ಗಂಡು ಆನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುಡ್ಡದ ಬೀರನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗ್ರಾಮದ ಪುಟ್ಟರಾಜು ಎಂಬುವವರಿಗೆ ಸೇರಿದ್ದ ಜಮೀನಿನಲ್ಲಿ ಜೋಳ ತಿನ್ನಲು ಬಂದಿದ್ದ ಆನೆಯು ತೋಟಕ್ಕೆ ಹಾಕಿದ್ದ ವಿದ್ಯುತ್ ತಂತಿ ಬೇಲಿ ತಗುಲಿ ಮೃತಪಟ್ಟಿದೆ. ಬೆಳಿಗ್ಗೆ 6.30 ರ ವೇಳೆಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದರು , ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.