ದೇಶದಲ್ಲಿ ಒಂದೇ ದಿನ 10,064 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,05,81,837ಕ್ಕೆ ಏರಿಕೆ…

88
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,064 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,05,81,837ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದನ ಕೊರೊನಾ ಸೋಂಕಿನಿಂದ 137 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,52,556ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,05,81,837 ಮಂದಿ ಸೋಂಕಿತರ ಪೈಕಿ ಈವರೆಗೆ 1,02,28,753 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನೂ 2,00,528 ಮಂದಿ ಸೋಂಕಿತರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.