11ನೇ ಮಹಡಿಯಿಂದ ಜಿಗಿದು ವೈದ್ಯ ಆತ್ಮಹತ್ಯೆ.

71
firstsuddi

ಬೆಂಗಳೂರು : ವೈದ್ಯರೊಬ್ಬರು ಕಟ್ಟಡದ 11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. 31 ವರ್ಷದ ಪೃಥ್ವಿಕಾಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವೈದ್ಯ.

ಹೆಬ್ಬಾಳದ ಗೋದ್ರೆಜ್ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಇವರು ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ 11ನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ವಿಕ್ಟೊರಿಯಾ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಪೃಥ್ವಿರಾಜ್, ಕಳೆದ ಮೂರು ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದರು. ಇವರು ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಆತ್ಮಹತ್ಯೆಗೂ ಮುನ್ನ ಮೊಬೈಲ್ ನಲ್ಲಿ ತೆಲುಗಿನಲ್ಲಿ ಡೆತ್ ನೋಟ್ ಬರೆದಿದ್ದಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.