ಬೆಂಗಳೂರು : ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿ ವ್ಯೂ ಅಪಾರ್ಟ್ಮೆಂಟ್ ನಲ್ಲಿ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗಗನ್(10) ಮೃತ ಬಾಲಕ. ನಿನ್ನೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಟೆರೇಸ್ ಮೇಲೆ ಆಟ ಆಡಲು ಬಾಲಕ ತೆರಳಿದ್ದ. ಈ ವೇಳೆ ಆಯತಪ್ಪಿ ಹನ್ನೊಂದನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










