ಚಂಡೀಗಢ: 11 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ.
ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅತ್ಯಾಚಾರಗೈದ ನಾಲ್ವರು ಅಪ್ರಾಪ್ತ ಆರೋಪಿಗಳಲ್ಲಿ ಓರ್ವ ಆಕೆಯ ಸಹಪಾಠಿಯಾಗಿದ್ದು, ಉಳಿದ ಮೂವರು ಸರ್ಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅತ್ಯಾಚಾರ ನಡೆದ ಬಳಿಕ ಸಂತ್ರಸ್ತೆ ತೀವ್ರ ಆಘಾತಕ್ಕೊಳಗಾಗಿದ್ದಳು. 15 ದಿನಗಳ ಬಳಿಕ ಆಕೆ ತನ್ನ ತಾಯಿಯ ಬಳಿ ಈ ಘಟನೆಯ ಬಗ್ಗೆ ಹೇಳಿಕೊಂಡಳು. ವಿಷಯ ತಿಳಿದ ತಕ್ಷಣ ಆಕೆಯ ತಾಯಿ ತರಗತಿ ಶಿಕ್ಷಕರು ಹಾಗೂ ಪ್ರಾಂಶುಪಾಲರನ್ನು ಭೇಟಿಯಾಗಿ ನಾಲ್ವರು ಅಪ್ರಾಪ್ತರು ತನ್ನ ಮಗಳ ಮೇಲೆ ಶಾಲೆಯ ಆವರಣದ ಪೊದೆಯ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ವಿವರಿಸಿದರು.
ಈ ವೇಳೆ ಸಂತ್ರಸ್ತೆಯ ತರಗತಿ ಶಿಕ್ಷಕಿ ಮಗುವಿನ ಸಹಾಯವಾಣಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ. ಈ ಕುರಿತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಗೈದ ನಾಲ್ವರು ಅಪ್ರಾಪ್ತ ಆರೋಪಿಗಳನ್ನು ಬಂಧಿಸಿದ್ದು, ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.










