11 ವರ್ಷಗಳ ಬಳಿಕ ಕೆಆರ್‌ಎಸ್‌ ಡ್ಯಾಂ ಭರ್ತಿ…

73
firstsuddi

ಮೈಸೂರು : ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, 11 ವರ್ಷದ ಬಳಿಕ ಕೆ.ಆರ್.ಎಸ್ ಜಲಾಶಯ ಬಹುತೇಕ ಭರ್ತಿಯಾಗಿದೆ.

ಜಲಾಶಯದ ನೀರಿನ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124.30 ಅಡಿ ಇದೆ. ಸದ್ಯಕ್ಕೆ ಡ್ಯಾಂಗೆ 11,345 ಕ್ಯೂಸೆಕ್ ಒಳ ಹರಿವು ಬರುತ್ತಿದ್ದು, ಡ್ಯಾಂನಿಂದ 3,608 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಸಂಪೂರ್ಣವಾಗಿ ಅಣೆಕಟ್ಟೆ ಭರ್ತಿಯಾಗಲು ಕೇವಲ 0.30 ಅಡಿ ಅಷ್ಟೇ ಬಾಕಿ ಇದೆ.

ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ಡ್ಯಾಂಗೆ ಸಂಪ್ರದಾಯದಂತೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ.