ರಾಯಚೂರು: ಚಾಕೊಲೇಟ್ ಆಸೆ ತೋರಿಸಿ 52 ವರ್ಷದ ವ್ಯಕ್ತಿ 11 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ಎಚ್ ಕ್ಯಾಂಪ್ 3ರಲ್ಲಿ ನಡೆದಿದೆ.
ಆಟವಾಡುತ್ತಿದ್ದ ಬಾಲಕಿಯನ್ನು ಸ್ಕೂಟಿಯಲ್ಲಿ ಕರೆದುಕೊಂಡು ಹೋಗಿ ಸಪನ್ ಮಂಡಲ್ ( 52) ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲಕಿ ಅಳುತ್ತಾ ಮನೆಗೆ ಬಂದಾಗ ಬಟ್ಟೆಯಲ್ಲಿ ರಕ್ತದ ಕಲೆ ಗಮನಿಸಿದ ಪೋಷಕರು ಬಾಲಕಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಆಕೆ ನಿಜಾಂಶ ತಿಳಿಸಿದ್ದಾಳೆ. ತಕ್ಷಣ ಪೋಷಕರು ಆರೋಪಿ ಸಪನ್ ಮಂಡಲ್ ವಿರುದ್ಧ ದೂರು ದಾಖಲು ಮಾಡಿದ್ದಾರೆ.
ದೂರು ದಾಖಲಾದ ಕೂಡಲೇ ಅಲರ್ಟ್ ಆದ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು, ಒಂದು ಗಂಟೆಯೊಳಗೆ ಆರೋಪಿ ಸಪನ್ ಮಂಡಲ್ ನನ್ನ ಬಂಧಿಸಿದ್ದಾರೆ. ಫೋಕ್ಸೋ ಕಾಯ್ದೆ ಅಡಿಯಲ್ಲಿ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರ್ ಎಚ್ ಕ್ಯಾಂಪ್ ನಲ್ಲಿ ನಡೆದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಆದೇಶಿಸಿದ್ದಾರೆ.










