12-14 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ : ಕೇಂದ್ರದ ಮೂಲಗಳು…

70
firstsuddi

ನವದೆಹಲಿ : ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ತೀವ್ರಗತಿಯಲ್ಲಿ ಸಾಗುತ್ತಿದ್ದು, ಈಗಾಗಲೇ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನೇಷನ್ ನೀಡಲಾಗುತ್ತಿದೆ. ಆದರೆ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿವೆ.

15 ರಿಂದ 18 ವರ್ಷದವರಿಗೆ ಮೊದಲ ಡೋಸ್ ಬಳಿಕ ಫೆಬ್ರವರಿಯಲ್ಲಿ ಎರಡನೇ ಡೋಸ್ ಗೂ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಎರಡನೇ ಡೋಸ್ ಕೂಡಾ ನೀಡಲಾಗುವುದು. ನಂತರ ಮಾರ್ಚ್ ನಲ್ಲಿ 12-14 ವಯೋಮಾನದವರಿಗೆ ಲಸಿಕೆ ಅಭಿಯಾನ ಆರಂಭಿಸುವ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಪ್ರತಿರಕ್ಷಣಾ ತಾಂತ್ರಿಕ ಸಲಹಾ ಗುಂಪು  ಅಧ್ಯಕ್ಷ ಡಾ ಎನ್ ಕೆ ಅರೋರಾ ಹೇಳಿದ್ದರು.

ಕೇಂದ್ರ ಸರ್ಕಾರದಿಂದ ಕೋವಿಡ್ ಲಸಿಕೆ ಆರಂಭವಾದಾಗಿನಿಂದ ಈವರೆಗೆ ಎಲ್ಲ ರೀತಿಯಲ್ಲಿ 1,58,04,41,770 ಕೋವಿಡ್ ಡೋಸ್ ವ್ಯಾಕ್ಸಿನೇಷನ್ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.