ದೇಶದಲ್ಲಿ 12,584 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,04,79,179ಕ್ಕೆ ಏರಿಕೆ…

104
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,584 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,04,79,179ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 167 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,51,327ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,04,79,179ಕ್ಕೆ ಮಂದಿ ಸೋಂಕಿತರ ಪೈಕಿ ಈವರೆಗೆ 1,01,11,294ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 2,16,558ಕ್ಕೆ ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.