13 ಜಿಲ್ಲೆಗಳಿಗೆ ಸಿಗದ ಪ್ರಾತಿನಿಧ್ಯ : ಬಿಎಸ್ ವೈ ಸಂಪುಟದಲ್ಲಿ ಸಚಿವರಾಗಿದ್ದ ಏಳು ಮಂದಿಗೆ ಕೊಕ್…

119
firstsuddi

ಬೆಂಗಳೂರು : ಈ ಬಾರಿಯೂ ಕೂಡ ಕೆಲವು ಜಿಲ್ಲೆಗಳು ಸಚಿವ ಸ್ಥಾನದಿಂದ ವಂಚಿತವಾಗಿವೆ. ಆರು ಜಿಲ್ಲೆಗಳಿಂದ ತಲಾ ಇಬ್ಬರು ಮಂತ್ರಿ ಮಂಡಲಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ನೂತನ ಸಚಿವ ಸಂಪುಟದ 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಆ ಜಿಲ್ಲೆಗಳೆಂದರೆ..
ಮೈಸೂರು, ಬಳ್ಳಾರಿ, ಹಾಸನ, ಕಲಬುರಗಿ, ದಾವಣಗೆರೆ, ರಾಯಚೂರು, ಯಾದಗಿರಿ, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ವಿಜಯಪುರ ಜಿಲ್ಲೆಗಳಿಗೆ ಸಚಿವ ಸ್ಥಾನ ದೊರೆತಿಲ್ಲ.

ಇನ್ನೂ ಬಿಎಸ್ ವೈ ಸಂಪುಟದಲ್ಲಿ ಸಚಿವರಾಗಿದ್ದ ಏಳು ಮಂದಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ. ಅವರೆಲ್ಲರಿಗೂ ಸಚಿವ ಸ್ಥಾನ ಕೈತಪ್ಪಿಹೋಗಿದೆ. ಜಗದೀಶ್ ಶೆಟ್ಟರ್, ಡಿಸಿಎಂ ಲಕ್ಷ್ಮಣ್ ಸವದಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್ ಸಚಿವ ಸ್ಥಾನದಿಂದ ದೂರ ಉಳಿದಿದ್ದಾರೆ.