13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…

177
firstsuddi

ಮಂಗಳೂರು: 13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಉಳಿಯತ್ತಡ್ಕ ನಿವಾಸಿ ಅಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಬಂಧಿತನು ಕಳೆದ 13 ವರುಷಗಳಿಂದ ತಲೆಮರೆಸಿಕೊಂಡಿದ್ದು ಈತನ ಬಂಧನಕ್ಕಾಗಿ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಭಾನುವಾರ ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡಿನ ವಿದ್ಯಾನಗರ ಎಂಬಲ್ಲಿ ದಸ್ತಗಿರಿ ಮಾಡಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣದ ವಿಚಾರಣೆ ಮುಂದುವರೆದಿದೆ.