13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ…

85
firstsuddi

ಕಲಬುರಗಿ : ತಂದೆಯೊಬ್ಬ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಘಟನೆ ಜಿಲ್ಲೆಯ ಜೇವರ್ಗಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ 2 ತಿಂಗಳ ಗರ್ಭಿಣಿಯಾದ ಮೇಲೆ ಘಟನೆ ಬೆಳಕಿಗೆ ಬಂದಿದೆ.

ಮನೆಯಲ್ಲಿ ಹೆಂಡತಿ ಇಲ್ಲದ ಸಮಯ ನೋಡಿಕೊಂಡು ಸ್ವತಃ ತಂದೆಯೇ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಬಾಲಕಿಯು 2 ದಿನದ ಹಿಂದೆ ವಾಂತಿಯಿಂದ ಬಳಲುತ್ತಿದ್ದಳು. ಹೀಗಾಗಿ ಆಕೆ ಆಸ್ಪತ್ರೆಗೆ ಹೋಗಿದ್ದಾಳೆ. ಆಸ್ಪತ್ರೆಯಲ್ಲಿ ತಪಾಸಣೆ ಮಾಡುವಾಗ ಅಪ್ರಾಪ್ತ ಬಾಲಕಿಯು ಗರ್ಭಿಣಿಯಾಗಿರುವ ಸತ್ಯ ಬಯಲಾಗಿದೆ.

ಈ ವೇಳೆ ಬಾಲಕಿಯು ತನ್ನ ತಂದೆಯಿಂದಲೇ ಅತ್ಯಾಚಾರಕ್ಕೆ ಒಳಗಾಗಿರುವ ವಿಷಯವನ್ನು ತಿಳಿಸಿದ್ದಾಳೆ. ಘಟನೆ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಾಲಕಿಯ ತಂದೆ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.