ನವದೆಹಲಿ : ಬರೋಬ್ಬರಿ 137 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಗೆ 101.42 ಮತ್ತು ಡೀಸೆಲ್ ಗೆ 85.80 ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21 ಇದ್ದರೆ, ಪ್ರತಿ ಲೀಟರ್ ಡೀಸೆಲ್ ಗೆ 87.47 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಗೆ 110.78, ಡೀಸೆಲ್ ಗೆ 94.94 ತಲುಪಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ 102.16 ಮತ್ತು ಡೀಸೆಲ್ ದರ 90.62 ಇದೆ. ಚೆನ್ನೈನಲ್ಲಿ ಪೆಟ್ರೋಲ್ ದರ 102.16, ಡೀಸೆಲ್ ದರ 92.19 ರೂಪಾಯಿಗೆ ಏರಿಕೆಯಾಗಿದೆ. 2021ರ ನವೆಂಬರ್ 2ರ ಬಳಿಕ ಇದೇ ಮೊದಲ ಬಾರಿ ಇಂಧನ ಬೆಲೆ ಏರಿಕೆ ಮಾಡಲಾಗಿದೆ.
ಮತ್ತೊಂದೆಡೆ ಗೃಹ ಬಳಕೆಯ ಸಿಲಿಂಡರ್ ದರ 50 ರೂ. ಏರಿಕೆಯಾಗಿದೆ. 2021ರ ಅಕ್ಟೋಬರ್ 6 ರ ಬಳಿಕ ಮೊದಲ ಬಾರಿಗೆ ದರ ಏರಿಕೆಯಾಗಿದೆ. ಇಂದಿನಿಂದಲೇ ಅನ್ವಯವಾಗುವಂತೆ ದರ ಏರಿಕೆ ಮಾಡಲಾಗಿದೆ. ಅದರಂತೆ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂ. ಆಗಿದೆ. ಬೆಂಗಳೂರಿನಲ್ಲಿ ಈ ಮೊದಲು 14.2 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 902.50 ರೂ. ಇದ್ದರೆ ಈಗ ಬೆಲೆ 952.50 ರೂ.ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 949.50 ರೂ.ಇದ್ದರೆ, ಕೋಲ್ಕತ್ತಾದಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 965.50 ರೂ.ಗೆ ಏರಿಕೆಯಾಗಿದೆ.










