14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ 7 ಮಂದಿ ಯುವಕರು..!

117
firstsuddi

ಚಿಕ್ಕಬಳ್ಳಾಪುರ : ಏಳು ಮಂದಿ ಯುವಕರು ನಿರಂತರ ಅತ್ಯಾಚಾರವೆಸಗಿದ ಪರಿಣಾಮ 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು 4 ತಿಂಗಳ ಗರ್ಭಿಣಿ ಆಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅದೇ ಗ್ರಾಮದ 7 ಮಂದಿ ಯುವಕರು ನಿರಂತರವಾಗಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಪರಿಣಾಮ ಬಾಲಕಿಯ ಆರೋಗ್ಯ ದ ಮೇಲೆ ಪ್ರಭಾವ ಆಗಿ ಆಸ್ಪತ್ರೆಗೆ ಹೋದಾಗ ಬಾಲಕಿ 4 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದ್ದು, ಅಪ್ರಾಪ್ತ ಬಾಲಕಿ ಗರ್ಭಿಣಿ ಆದ ಬೆನ್ನಲ್ಲೇ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ 7 ಮಂದಿ ವಿರುದ್ದ ದೂರು ದಾಖಲಿಸಲಾಗಿದೆ. ಅಲ್ಲದೇ 7 ಮಂದಿ ಕಿರಾತಕರು ಬಾಲಕಿಯನ್ನು ಪುಸಲಾಯಿಸಿ ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ದೊಡ್ಡಬ್ಯಾಲ್ಯಾ ಗ್ರಾಮದ ನಿವಾಸಿ ಗೌರಿ ಸೇರಿದಂತೆ ಅದ್ದೆಕೊಪ್ಪ ಗ್ರಾಮದ ಮೂರ್ತಿ, ರಾಜೇಶ್, ವಿನೋದ್, ನರಸಿಂಹಮೂರ್ತಿ ಸೇರಿ 7 ಜನರ ವಿರುದ್ಧ ಅತ್ಯಾಚಾರ ಆರೋಪದಡಿ ದೂರು ದಾಖಲಾಗಿದೆ. ಸದ್ಯ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.