ಹುಬ್ಬಳ್ಳಿ: ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿ ಕಟ್ಟಲಾಗಿದ್ದ 14 ಜಾನುವಾರುಗಳು ಸಜೀವವಾಗಿ ದಹನವಾಗಿರುವ ಘಟನೆ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಡಿವಯ್ಯ ಹಿರೇಮಠ್ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ಅವಘಡ ಸಂಭವಿಸಿದ್ದು, ದನದ ಕೊಟ್ಟಿಗೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, 14 ಜಾನುವಾರಗಳು ಮೃತಪಟ್ಟಿವೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










